ಶಿವಮೊಗ್ಗ : ಶೀಘ್ರದಲ್ಲಿ ಆರಂಭಗೊಳ್ಳಲಿರುವ ಸೋಗಾನೆ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸುವ ಪೂರ್ವದಲ್ಲಿ ಶಿವಮೊಗ್ಗದಿಂದ ದೇಶದ ಬೇರೆ-ಬೇರೆ ವಿಮಾನ ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸುವ ಸಂಬಂಧ ವಿಮಾನ ಸಂಚಾರಕ್ಕೆ ಅನುಕೂಲ ವಾಗುವಂತೆ ಕೂಡಲೇ ಟೆಂಡರ್ ಪ್ರಕ್ರಿಯೆ ಯನ್ನು ಆರಂಭಗೊಳಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾಧಿತ್ಯ ಸಿಂಧ್ಯಾ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.


ಶಿವಮೊಗ್ಗ ವಿಮಾನ ನಿಲ್ದಾಣ ಸದ್ಯದ ಲ್ಲಿಯೇ ಲೋಕಾರ್ಪಣೆಗೊಳ್ಳಲಿದೆ, ಇದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ರಾಜ್ಯದ ಎರಡನೇ ಅತಿ ಉದ್ದವಿರುವ ರನ್‌ವೇ ಹೊಂದಿದ್ದು, ಶಿವಮೊಗ್ಗ ಜಿಲ್ಲೆ ಕರ್ನಾಟಕ ಭೂಪಟದ ಮಧ್ಯಭಾಗದಲ್ಲಿ ಇರುತ್ತದೆ. ಆದ್ದರಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆದಷ್ಟು ಬೇಗ Multi Disciplinary Team
ಕೂಡಲೇ ಕಳುಹಿಸಿಕೊಡುವುದು, Electrical Equipment Funding, RCS UDAN-4.2 ಯೋಜನೆ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆ ಹಾಗೂ ನೆರೆಯ ಜಿಲ್ಲೆಗಳ ಜನರಿಗೆ ದೇಶದ ಮಹಾನಗರಗಳಿಗೆ ಹೋಗಿಬರಲು ಮತ್ತು ವ್ಯಾಪಾರ ಹಾಗೂ ಪ್ರವಾಸೋದ್ಯಮ ಸಲುವಾಗಿ ಬರುವ ಪ್ರಯಾಣಿಕರನ್ನು ಉತ್ತೇಜನ ನೀಡುವ ಸಲುವಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಮೂಲಕ ದೇಶದ 11 ಪ್ರಮುಖ ನಗರಗಳ ವಿಮಾನ ನಿಲ್ದಾಣಕ್ಕೆ ಜೋಡಣೆ ಮಾಡುವ ಮಾರ್ಗಗಳಾದ ಮುಂಬಯಿ-ಶಿವಮೊಗ್ಗ-ಮುಂಬಯಿ, ಮುಂಬಯಿ – ಶಿವಮೊಗ್ಗ-ಮಂಗಳೂರು, ಮುಂಬಯಿ-ಶಿವಮೊಗ್ಗ-ಚೆನ್ನೈ, ಮುಂಬಯಿ-ಶಿವಮೊಗ್ಗ-ತಿರುಪತಿ, ಶಿವಮೊಗ್ಗ-ಗುಲ್ಬರ್ಗಾ-ಹೈದ್ರಾಬಾದ್, ಶಿವ ಮೊಗ್ಗ-ಗುಲ್ಬರ್ಗಾ-ದೆಹಲಿ, ಬೆಂಗಳೂರು-ಶಿವಮೊಗ್ಗ-ಬೆಳಗಾಂ, ಬೆಂಗಳೂರು-ಶಿವಮೊಗ್ಗ-ದೆಹಲಿ ಮತ್ತು ಬೆಂಗಳೂರು-ಶಿವಮೊಗ್ಗ-ಗೋವಾ ಹಾಗೂ ಹೈದ್ರಾ ಬಾದ್-ಶಿವಮೊಗ್ಗ-ಕೊಚಿನ್ ಮಾರ್ಗಗಳ ವಿಮಾನ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

By admin

ನಿಮ್ಮದೊಂದು ಉತ್ತರ

You missed

error: Content is protected !!