ಶಿವಮೊಗ್ಗ : ಕೇಂದ್ರ ಸರ್ಕಾರ ಅಭಿವೃದ್ದಿ ಪರ್ವದ ಜೊತೆ ಹೊಸ ಆಲೋಚನೆಗಳು ಕೂಡ ದೇಶಕ್ಕಾಗಿ ನೀಡುತ್ತಿದೆ ಎಂದು ವಿಧಾನ ಪರಿಷತ್ ಶಾಸಕ ಎಸ್.ರುದ್ರೇಗೌಡ ಹೇಳಿದರು.
ನಗರದ ಬಿಜೆಪಿ ಕಾರ್ಯಾಲಯದಲ್ಲಿ ಇಂದು ನಡೆದ ಪಕ್ಷದ ಕಾರ್ಯಕಾರಿಣಿ ಸಭೆ ಹಾಗೂ ಆತ್ಮ ನಿರ್ಭರ ಕುರಿತ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು
ಮೋದಿ ನೇತೃತ್ವದ ಸರ್ಕಾರ ರಾಷ್ಟ್ರದ ಜನತೆಗೆ ಹಿಂದೆಂದೂ ಕಾಣದಷ್ಟು ಅಭಿವೃದ್ದಿ ಕಾರ್ಯಗಳನ್ನು ಮಾಡಿದೆ. ಈ ಬಗ್ಗೆ ಸ್ವತಹ ಮೋದಿಯವರೇ ಹೊಸ ಹೊಸ ಯೋಜನೆಗಳನ್ನು ರೂಪಿಸಿರುವುದು ಮತ್ತೊಂದು ಯೋಜನೆಯಾಗಿದೆ ಎಂದರು.
ಪ್ರಸ್ತುತ ದೇಶದ ೫ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಈ ಚುನಾವಣೆಗಳನ್ನು ನಮ್ಮ ಪಕ್ಷ ಅಭಿವೃದ್ದಿ ಆಧಾರದ ಮೇಲೆಯೇ ಎದುರಿಸುತ್ತಿದೆ ಆ ರಾಜ್ಯಗಳ ಜನತೆ ನಮ್ಮ ಸರ್ಕಾರದ ಕಾರ್ಯವೈಖರಿಯನ್ನು ಮೆಚ್ಚಿ ಅಭೂತ ಪೂರ್ವ ಬೆಂಬಲವನ್ನು ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿಯೂ ಅಭಿವೃದ್ದಿ ಕಾರ್ಯಗಳ ಆಧಾರದ ಮೇಲೆ ಮುಂದಿನ ವರ್ಷ ನಡೆಯುವ ಚುನಾವಣೆಯನ್ನು ಎದುರಿಸಲಾಗುವುದು ಎಂದ ಅವರು, ಕೋವಿಡ್ನಂತಹ ಸಂಕಷ್ಟದ ಸಂದರ್ಭದಲ್ಲಿಯೂ ಕೇಂದ್ರ ಸರ್ಕಾರ ಉತ್ತಮ ಬಜೆಟ್ನ್ನು ನೀಡಿರುವುದು ಅತ್ಯಂತ ಸ್ವಾಗತಾರ್ಹ ಎಂದರು.
ದೇಶದ ಜನತೆ ಅದರಲ್ಲೂ ಯುವ ಸಮೂಹ ಸ್ವಾವಲಂಬಿಯಾಗಿ ಬದುಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆಯನ್ನು ನೀಡಿದೆ. ಉದ್ಯೋಗವನ್ನು ಸೃಷ್ಟಿಸುವ ಸಲುವಾಗಿ ವಿವಿಧ ಯೋಜನೆಯನ್ನು ರೂಪಿಸಿದೆ,. ಇದು ಯುವ ಸಮೂಹಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿ.ವಿ.ಕೃಷ್ಣ., ಪಕ್ಷದ ಜಿಲ್ಲಾಧ್ಯಕ್ಷ ಟಿ.ಡಿ,.ಮೇಘರಾಜ್, ಶಾಸಕರಾದ ಡಿ.ಎಸ್.ಅರುಣ್, ಅಶೋಕ್ನಾಯ್ಕ್, ,ಮಾಜಿ ಶಾಸಕರಾದ ಆರ್.ಕೆ. ಸಿದ್ದರಾಮಣ್ಣ, ಗಿರೀಶ್ಪಟೇಲ್ ಮುಂತಾದವರು ಉಪಸ್ಥಿತರಿದ್ದರು.

