ಶಿವಮೊಗ್ಗ ಜಿಲ್ಲೆಯಲ್ಲಿರುವ ಪ್ರೌಢಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ 6ಗಂಟೆಯಿಂದ 144 ಸೆಕ್ಷನ್ ಅಡಿ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.*
*ಸೋಮವಾರ 10 ನೇ ತರಗತಿವರೆಗೆ ಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಶಾಲಾ ಚಟುವಟಿಕೆಗಳ ಸುಗಮ ನಿರ್ವಹಣೆಗಾಗಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪ್ರೌಢಶಾಲೆಗಳ ಆವರಣದಿಂದ 200 ಮೀಟರ್ ಒಳಗಡೆ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.