ಶಿವಮೊಗ್ಗ, ಫೆ.15:
ಶ್ರೀ ಸೇವಾಲಾಲ್ 283 ನೇ ಜಯಂತಿಯ ಪ್ರಯುಕ್ತ ಸನ್ಮಾನ್ಯ ಮುಖ್ಯ ಮಂತ್ರಿ ಬಸವರಾಜ್ ಬೋಮ್ಮಯಿ ಅವರ ರೇಸ್ ಕೋರ್ಸ್ ರಸ್ತೆಯ ನಿವಾಸದ ಆವರಣದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ ಭಾಗವಹಿಸಿ ಸೇವಾಲಾಲ್ ಜಯಂತಿಯನ್ನು ದೀಪವನ್ನು ಬೆಳಗಿಸುವುದರ ಮೂಲಕ ಆಚರಿಸಲಾಯಿತು.
ಹಾಗೂ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ವತಿಯಿಂದ 2022 ನೇ ವರ್ಷದ ಕ್ಯಾಲೆಂಡರ್ ನ್ನು ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಪಿ.ರಾಜೀವ್ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಮಾನ್ಯ ಗೋವಿಂದ ಕಾರಜೋಳ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ನಿಗಮದ ಅಧಿಕಾರಿಗಳು. ಉಪಸ್ಥಿತರಿದ್ದರು.