ಶಿವಮೊಗ್ಗ,ಆ.03:
ಸಾರ್ವಜನಿಕ ಸ್ಥಳದಲ್ಲಿ ಇಸ್ಪಿಟು ಜೂಜಾಟ ಆಡುತ್ತಿದ್ದ 11 ಆರೋಪಿತರ ಬಂಧನ, ಜೂಜಾಟದಲ್ಲಿ ಪಣವಾಗಿಟ್ಟಿದ್ದ ರೂ 52, 000/- (ರೂಪಾಯಿ ಐವತ್ತ ಎರಡು ಸಾವಿರ) ನಗದು ಹಣ, ಹಾಗೂ ರೂ 29, 60,000/- (ರೂಪಾಯಿ ಇಪ್ಪತ್ತ ಒಂಬತ್ತು ಲಕ್ಷದ ಅರವತ್ತು ಸಾವಿರ) ಮೌಲ್ಯದ 04 ಕಾರುಗಳು, 01 ದ್ವಿ ಚಕ್ರ ವಾಹನವನ್ನು ಅಮಾನತ್ತು ಪಡಿಸಿಕೊಂಡು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.
ಶಿವಮೊಗ್ಗದ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ವೀರನಬೆನವಳ್ಳಿ ಗ್ರಾಮದ ರವಿಕುಮಾರ್ ಎಂಬುವವರ ಮಾವಿನ ತೋಟದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಜನರು ಗುಂಪು ಸೇರಿಕೊಂಡು ಅಕ್ರಮ ಇಸ್ಪಿಟು ಜೂಜಾಟ ಆಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶಿವಮೊಗ್ಗ ಡಿಎಸ್ ಪಿ ಉಮೇಶ್ ಈಶ್ವರ್ ನಾಯಕ್ ಮಾರ್ಗದರ್ಶನದಲ್ಲಿ, ಗ್ರಾಮಾಂತರ ಸಿಪಿಐ ಸಂಜೀವ್ ಕುಮಾರ್ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡವನ್ನು ರಚಿಸಿ ಕಾರ್ಯಾಚರಣೆ ನಡೆಸಿ, ಕಾನೂನು ಬಾಹಿರವಾಗಿ ಇಸ್ಪೀಟು ಜೂಜಾಟ ಆಡುತ್ತಿದ್ದ ಒಟ್ಟು 11 ಜನ ಆರೋಪಿತರನ್ನು ವಶಕ್ಕೆ ಪಡೆದಿರುತ್ತದೆ.
ಆರೋಪಿತರಿಂದ ಜೂಜಾಟದಲ್ಲಿ ಪಣವಾಗಿಟ್ಟಿದ್ದ *ರೂ 52, 000/- (ರೂಪಾಯಿ ಐವತ್ತ ಎರಡು ಸಾವಿರ) ನಗದು ಹಣ, ಹಾಗೂ ರೂ 29,60,000/- (ರೂಪಾಯಿ ಇಪ್ಪತ್ತ ಒಂಬತ್ತು ಲಕ್ಷದ ಅರವತ್ತು ಸಾವಿರ) ಮೌಲ್ಯದ 04 ಕಾರುಗಳು, 01 ದ್ವಿ ಚಕ್ರ ವಾಹನವನ್ನು ಅಮಾನತ್ತು ಪಡಿಸಿಕೊಂಡು, ಆರೋಪಿತರ ವಿರುದ್ಧ ಅಕ್ರಮ ಜೂಜಾಟ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದೆ ಎಂದು ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

You missed

error: Content is protected !!