ಬೆಂಗಳೂರು,ಆ.3:
ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ನನ್ನ ಕೊರೊನಾ ತಪಾಸಣಾ ಪರೀಕ್ಷೆಯಲ್ಲಿ ಪಾಸಿಟೀವ್ ಬಂದಿದೆ. ನನಗೆ ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯರ ಸೂಚನೆಯಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು, ನನ್ನ ಜೊತೆ ಓಡಾಡಿದವರು ಮುಂಜಾಗೃತಾ ಕ್ರಮವಾಗಿ ಕ್ವಾರಂಟೈನ್ ನಲ್ಲಿರಲು ಸೂಚಿಸಿದ್ದೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆದಷ್ಟು ಬೇಗನೆ ಗುಣಮುಖರಾಗಲಿ ಎಂದು ಸಚಿವ ಡಾ.ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಮತ್ತೊಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಸಹ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದ್ದು ಅಧಿಕಾರಿಗಳು, ಜನಪ್ರತಿನಿಧಿಗಳನ್ನು ಬಿಟ್ಟೂ ಬಿಡದೇ ಕಾಡುವ ಕಿರಿಕ್ ಕೊರೊನಾ ಆತಂಕವನ್ನು ಸೃಷ್ಟಿಸಿದೆ.
ಭಾನುಪ್ರಕಾಶ್ ರಿಗೆ ಸೊಂಕು?
ಮಾಜಿ ವಿಧಾನ ಪರಿಷತ್ ಸದಸ್ಯರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎನ್ನಲಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾಜಿ ಪರಿಷತ್ ಸದಸ್ಯರಾದ ಭಾನುಪ್ರಕಾಶ್ ಅವರು ಹೋಂ ಐಸೋಲೇಶನ್ ಗೆ ಒಳಪಟ್ಟಿದ್ದಾರೆನ್ನಲಾಗಿದೆ.
ಶಿವಮೊಗ್ಗದ ಮತ್ತೂರು ಗ್ರಾಮದಲ್ಲಿರುವ ನಿವಾಸದಲ್ಲಿ ಐಸೋಲೇಶನ್ ಆಗಿ ನಾಳೆಯಿಂದ ಚಿಕಿತ್ಸೆ ಪಡೆಯಲಿದ್ದಾರೆನ್ನಲಾಗಿದೆ.
ಇತ್ತೀಚೆಗೆ ರಾಜ್ಯ ಬಿಜೆಪಿ ಪ್ರಕೋಷ್ಠಕದ ಸಂಯೋಜಕರಾಗಿ ಆಯ್ಕೆಯಾಗಿದ್ದರು.
ಶಿವಮೊಗ್ಗದ ವರದಿ
ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 30 ಕೊರೊನಾ ಪಾಸಿಟಿವ್ ದೃಢಪಟ್ಟಿದೆ.ಜಿಲ್ಲೆಯಲ್ಲಿ ಒಟ್ಟು ಸೋಂಕಿತರು 1982 ಕ್ಕೆ ಏರಿಕೆಯಾಗಿದ್ದು
39 ಜನರು ಕೋವಿಡ್-19 ಮೆಗ್ಗಾನ್ ಆಸ್ಪತ್ರೆಯಿಂದ ಇಂದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಇದುವರೆಗೆ ಕೋವಿಡ್-19 ಮೆಗ್ಗಾನ್ ಆಸ್ಪತ್ರೆಯಿಂದ ಬಿಡುಗಡೆಯಾದವರು 1063 ಆಗಿದ್ದು ಸದರಿ 879 ಜಿಲ್ಲೆಯಲ್ಲಿ ಕೊರೊನಾ ಸಕ್ರಿಯ ಕೇಸ್ ಗಳಿವೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು ಮೂರು ಜನ ಸಾವು ಕಂಡಿದ್ದು
ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇದುವರೆಗೆ ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದಿನ ತಾಲೂಕುವಾರು ವಿವರ :-
ಶಿವಮೊಗ್ಗ : 23
ಶಿಕಾರಿಪುರ :02
ಹೊಸನಗರ : 01
ತೀರ್ಥಹಳ್ಳಿ : 02