ಶಿವಮೊಗ್ಗ : ಹಿಜಾಬ್ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರೆದಿದೆ. ಇಂದು ಕೂಡ ನಗರದ ಅನೇಕ ಕಾಲೇಜ್ಗಳಲ್ಲಿ ಮುಸ್ಲಿಂ ವಿದ್ಯಾರ್ಥಿ ನಿಯರು ಕಾಲೇಜ್ಗಳಿಗೆ ಆಗಮಿಸಿ ಹಿಜಾಬ್ ಗೆ ಅವಕಾಶ ನೀಡದ ಕಾರಣ ವಾಪಸ್ ತೆರಳಿದರು.

ಎಲ್ಲಾ ಕಾಲೇಜುಗಳ ಸುತ್ತಮುತ್ತಲೂ ಸೆಕ್ಷನ್ 144 ಜಾರಿಯಲ್ಲಿರುವುದರಿಂದ ಬಿಗಿ ಪೊಲೀಸ್ ಬಂದೋ ಬಸ್ತ್ ಕೈಗೊಂಡಿದ್ದರು. ಸಹ್ಯಾದ್ರಿ ವಾಣಿಜ್ಯ ಕಾಲೇಜ್ ತರಗತಿಗೆ ಹಿಜಾಬ್ ಧರಿಸಿ ಹೋಗಲು ಅವಕಾಶ ನೀಡದ ಕಾರಣ ಕಾಲೇಜ್ ಆವರಣದಲ್ಲಿ 20 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಕುಳಿತುಕೊಂಡು ಪಾಠ, ಓದುವ ಅಭ್ಯಾಸದಲ್ಲಿ ತೊಡಗಿದ್ದರು.
ಇನ್ನುಳಿದಂತೆ ಕೆಲವು ಕಾಲೇಜ್ ಗಳಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ಇರಲಿಲ್ಲ. ಇದರಿಂದಾಗಿ ವಿದ್ಯಾರ್ಥಿ ನಿಯರು ಮನೆಗೆ ವಾಪಸ್ ತೆರಳಿದರು.
9 ಜನರ ವಿರುದ್ಧ ಎಫ್ಐಆರ್
ಶಿವಮೊಗ್ಗ : ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ ೯ ಜನರ ವಿರುದ್ಧ ಶಿರಾಳಕೊಪ್ಪ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಾರೆ ಎಂಬವ ಆರೋಪದ ಮೇಲೆ ಪುರಸಭೆ ಸದಸ್ಯರಾದ ಮುದಾಸೀರ್, ಸಾಧಿಕ್, ಶಿರಾಳಕೊಪ್ಪ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಬಿಲಾಲ್ ಸೇರಿದಂತೆ 9 ಜನರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿವಿಧ ಶಾಲೆಯ ವಿದ್ಯಾರ್ಥಿನಿಯರು ಗುರುವಾರವೂ ಪ್ರತಿಭಟನೆ ಮುಂದುವರಿಸಿದರು. ಕರ್ನಾಟಕ ಪಬ್ಲಿಕ್ ಶಾಲೆಯ ಪಿಯು, ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿ ಯರು ಹಿಜಾಬ್ ಧರಿಸಿ ಬಂದಿದ್ದರು. ಶಿಕ್ಷಕರು ವಿದ್ಯಾರ್ಥಿನಿಯರ ಮನವಲಿಸಿ ತರಗತಿಗೆ ಕರೆದುಕೊಂಡು ಹೋದರು.

ತಡಗಣಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕರ್ನಾಟಕ ಪಬ್ಲಿಕ್ ಶಾಲೆಯ ಪಿಯು ದ್ಯಾರ್ಥಿನಿಯರು ಮದ್ಯಾಹ್ನದವರೆಗೂ ಪ್ರತಿಭಟನೆ ಮುಂದುವರಿಸಿದರು.
ಶಿವಮೊಗ್ಗ ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿನಿಯರು ಹಿಜಾಬ್ ಇಲ್ಲದೆ ಕಾಲೇಜಿನ ಒಳಗೆ ಪ್ರವೇಶ ನೀಡದ ಕಾರಣ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದು ನ್ಯಾಯಾಲಯ ತೀರ್ಪು ಬರುವವರೆಗೂ ಹಿಜಾಬ್ಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿನಿಯರ ಪರವಾಗಿ ನಿಂತ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆಗೆ ಕೈ ಜೋಡಿಸಿದರು.