ಕಾವೇರಿ ನಿವಾಸದಲ್ಲಿ ಆಚರಣೆ

ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರವರು ಜನ್ಮದಿನದ ಪ್ರಯುಕ್ತ ಇಂದು ಅವರ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು, ಕುಟುಂಬ ವರ್ಗ, ಶಾಸಕರು ಮತ್ತು ಪ್ರಮುಖರು ಭಾಗವಹಿಸಿದ್ದರು.

ವಾಣಿಜ್ಯ ಕೈಗಾರಿಕಾ ಸಂಘದಿಂದ ಅಭಿನಂದನೆ

ರೈತ ನಾಯಕ, ಜನಪ್ರಿಯ ಮಾಜಿ ಮುಖ್ಯಮಂತ್ರಿ, ಅಭಿವೃದ್ಧಿಪರ ಚಿಂತಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಜನ್ಮದಿನದ ಶುಭಾಶಯಗಳನ್ನು ಕೋರಲಾಯಿತು.
ಕರ್ನಾಟಕವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಿದ ಜನಪರ ಕಾಳಜಿಯ ನಾಯಕ ಬಿ.ಎಸ್.ಯಡಿಯೂರಪ್ಪ ರಾಜ್ಯದ ಜನರ ಎಲ್ಲರ ಅಚ್ಚುಮೆಚ್ಚಿನ ನಾಯಕರಾಗಿದ್ದಾರೆ. ಮುಂದಿನ ದಿನಗಳಲ್ಲಿಯೂ ರಾಜ್ಯದ ಅಭಿವೃದ್ಧಿಗೆ ನಿರಂತರ ಕೊಡುಗೆ ನೀಡಿದ್ದಾರೆ ಎಂದರು.


ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕ ಎಂ.ರಾಜು, ಸಹಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಪರಮೇಶ್ವರ್ ಉಪಸ್ಥಿತರಿದ್ದರು.

ಕೋಟೆ ಶ್ರೀ ರಾಮಾಂಜುನೇಯ ದೇಗುಲದಲ್ಲಿ ಪೂಜೆ

ಇಂದು ಬಿಜೆಪಿ ಶಿವಮೊಗ್ಗ ನಗರ ವತಿಯಿಂದ ನಮ್ಮೆಲ್ಲರ ಹಿರಿಯರು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ನಗರದ ಶ್ರೀ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಅಧ್ಯಕ್ಷ ಎನ್.ಕೆ.ಜಗದೀಶ್, ವಿಧಾನ ಪರಿಷತ್ ಶಾಸಕರಾದ ಎಸ್. ರುದ್ರೇಗೌಡ್ರು, ಅರುಣ್ ಡಿ.ಎಸ್, KSSIDC ಉಪಾಧ್ಯಕ್ಷ ದತ್ತಾತ್ರಿ, ಸೂಡಾ ಅಧ್ಯಕ್ಷ ಎನ್.ಜಿ.ನಾಗರಾಜ್, APMC ಅಧ್ಯಕ್ಷ ಜಗದೀಶ್, ಮಹಾನಗರ ಪಾಲಿಕೆಯ ಸದಸ್ಯರಾದ ಎಸ್. ಎನ್.ಚನ್ನಬಸಪ್ಪನವರು, ಜ್ಞಾನೇಶ್ವರ, ಪ್ರಧಾನ ಕಾರ್ಯದರ್ಶಿ ಸಂತೋಷ್, ಪ್ರಮುಖರಾದ ಎಸ್.ಎಸ್.ಜ್ಯೋತಿ ಪ್ರಕಾಶ್, ರಾಜಶೇಖರ್, ಜಿಲ್ಲಾ ಬಿಜೆಪಿ ಖಜಾಂಚಿ ರಾಮಣ್ಣ ಮತ್ತಿತರೇ ಪ್ರಮುಖರು ಉಪಸ್ಥಿತರಿದ್ದರು.

ರವೀಂದ್ರನಗರದ ಗಣಪತಿ ದೇವಾಲಯದಲ್ಲಿ ಪೂಜೆ

ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪನವರ ಜನ್ಮದಿನದ ಹಿನ್ನೆಲೆಯಲ್ಲಿ ರವೀಂದ್ರ ನಗರದ ಗಣಪತಿ ದೇವಸ್ಥಾನದಲ್ಲಿ ಬಿ ಎಸ್ ಯಡಿಯೂರಪ್ಪನವರಿಗೆ ಶುಭವಾಗಲಿ ಎಂದು ಪೂಜೆಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಎಸ್ ರುದ್ರೇಗೌಡ್ರು ಮತ್ತು ಡಿ ಎಸ್ ಅರುಣ್, ಸಣ್ಣ ಕೈಗಾರಿಕಾ ನಿಗಮದ ದತ್ತಾತ್ರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗರಾಜ್,ನಗರ ಬಿಜೆಪಿ ಅಧ್ಯಕ್ಷ ಜಗದೀಶ, ಚೆನ್ನಬಸಪ್ಪ (ಚೆನ್ನಿ),ಮತ್ತು ಜ್ಞಾನೇಶ್ವರ, ಎಸ್ ಎಸ್ ಜ್ಯೋತಿಪ್ರಕಾಶ್,ಸಂತೋಷ್, ಎನ್.ಜೆ. ರಾಜಶೇಖರ್ (ಸುಭಾಷ್), ಸಿ.ಹೆಚ್. ಮಾಲತೇಶ, ದಿವಾಕರ ಶೆಟ್ಟಿ, ರಾಜೇಶ್ ಕಾಮತ್, ಬಾಬಿ, ಸೇರಿದಂತೆ ಹಲವು ಪ್ರಮುಖರು ಈ ಸಂದರ್ಭದಲ್ಲಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!