ಬೆಂಗಳೂರು, ಮಾ.15:
ಹಿಜಾಬ್ ಕೇಸರಿ ಶಾಲಿನ ವಿಚಾರವಾಗಿ ಇಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ.
ಸಮವಸ್ರ್ತ ಪಾಲನೆ ಕಡ್ಡಾಯವಾಗಿದ್ದು, ಮುಂದಿನ ಆದೇಶದವರೆಗೆ ಶಾಲಾ ಕಾಲೇಜುಗಳ ಆದೇಶಪಾಲನೆಗೆ ಸೂಚಿಸಿದೆ.
ಮುಸ್ಲಿಂ ಮಹಿಳೆಯರು ಹಿಜಾಬ್ ದರಿಸುವುದು ಕಡ್ಡಾಯವಾಗಿಲ್ಲ. ಹೈಕೋರ್ಟ್ ಆದೇಶ ಪಾಲನೆ ಪ್ರಸ್ತುತ ಕಡ್ಡಾಯವಾಗಿದೆ.
ತರಗತಿಗಳಲ್ಲಿ ಹಿಜಾಬ್-ಕೇಸರಿ ವಸ್ತ್ರ ಧರಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಮವಸ್ತ್ರ ಕಡ್ಡಾಯಕ್ಕೆ ವಿದ್ಯಾರ್ಥಿಗಳು ವಿರೋಧಿಸುವಂತಿಲ್ಲ: ನ್ಯಾಯಪೀಠ
ರಾಜ್ಯ ಸರ್ಕಾರದ ಆದೇಶವನ್ನು ರಾಜ್ಯ ಉಚ್ಛ ನ್ಯಾಯಾಲಯ ಎತ್ತಿ ಹಿಡಿದಿದೆ
ಈ ಕುರಿತಂತೆ ಇಂದು ತೀರ್ಪು ಪ್ರಕಟಿಸಿದ ಮುಖ್ಯ ನ್ಯಾ. ರಿತುರಾಜ್ ಅವಸ್ಥಿ, ಸರ್ಕಾರದ ಆದೇಶ ವಿವೇಚನಾ ರಹಿತವಾದುದು ಎಂಬ ವಾದವಿದೆ. ಹಿಜಾಬ್ ಧಾರ್ಮಿಕ ಸ್ವಾತಂತ್ರದ ಹಕ್ಕು ಎಂಬ ವಾದವೂ ಸಹ ಇದೆ. ಆದರೆ, ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗವಲ್ಲ ಎಂದು ನ್ಯಾಯಾಲಯ ಹೇಳಿದೆ.
ರಾಜ್ಯ ಸರ್ಕಾರ ಜಾರಿಗೊಳಿಸುವ ಸಮವಸ್ತ್ರ ಕಡ್ಡಾಯವನ್ನು ವಿದ್ಯಾರ್ಥಿಗಳು ವಿರೋಧಿಸುವಂತಿಲ್ಲ ಎಂದಿರುವ ನ್ಯಾಯಪೀಠ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ.
ಕೋರ್ಟ್ ತೀರ್ಪು ಪಾಲಿಸಿ, ಕಾನೂನು ಸುವ್ಯವಸ್ಥೆ ಕಾಪಾಡಲು ಸಿಎಂ ಬೊಮ್ಮಾಯಿ ಮನವಿ
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ ಇಂದು ನೀಡಿರುವ ತೀರ್ಪನ್ನು ಎಲ್ಲರೂ ಪಾಲಿಸಿ, ವಿದ್ಯಾರ್ಥಿನಿಯರು ಶಿಕ್ಷಣಕ್ಕೆ ಮಹತ್ವ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.
ಹಿಜಾಬ್ ತೀರ್ಪಿನ ಹಿನ್ನೆಲೆಯಲ್ಲಿ ಮಾತನಾಡಿರುವ ಅವರು, ನ್ಯಾಯಪೀಠ ಪ್ರಕಟಿಸಿರುವ ತೀರ್ಪನ್ನು ಪಾಲಿಸಬೇಕಾಗಿರುವುದು ಎಲ್ಲರ ಕರ್ತವ್ಯ. ಹೀಗಾಗಿ ನ್ಯಾಯಾಲಯದ ಆದೇಶದಂತೆ ಎಲ್ಲ ವಿದ್ಯಾರ್ಥಿಗಳು ಪಾಲಿಸಿ, ಯಾವುದೇ ಗೊಂದಲಗಳಿಗೆ ಅವಕಾಶ ನೀಡದೇ, ಶಿಕ್ಷಣಕ್ಕೆ ಮಹತ್ವ ನೀಡಬೇಕು ಎಂದರು.
ಇನ್ನು, ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಪ್ರತಿಯೊಬ್ಬರೂ ಸಹಕರಿಸಬೇಕು. ಬದಲಾಗಿ ಯಾರಾದರೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಯತ್ನಿಸಿದರೆ ಗೃಹ ಇಲಾಖೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.