ಬೆಂಗಳೂರು,ಮಾ.19:
ಪಾವಗಡ ಪಳವಳ್ಳಿಕಟ್ಟೆ ಬಳಿಯಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಬಿದ್ದು ಭೀಕರ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ 10ಕ್ಕೂ ಅಧಿಕ ಪ್ರಯಾಣಿಕರು ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ್ದಾರೆ.
ಇಂದು ಮುಂಜಾನೆ ಈ ಘಟನೆ ಸಂಭವಿಸಿದ್ದು, ಅಪಘಾತಕ್ಕೀಡಾದ ಬಸ್’ನಲ್ಲಿ 80 ಕ್ಕೂ ಅಧಿಕ ಪ್ರಯಾಣಿಕರು ಇದ್ದರು ಇಂದು ಹೇಳಲಾಗಿದ್ದು, ಅತಿ ವೇಗದ ಚಾಲನೆಯೇ ದುರಂತಕ್ಕೆ ಕಾರಣ ಎನ್ನಲಾಗಿದೆ.
ಬಸ್ ಪಲ್ಟಿಯಾದ ರಭಸಕ್ಕೆ ಸ್ಥಳದಲ್ಲೇ ೮ ಪ್ರಯಾಣಿಕರು ಸಾವನ್ನಪ್ಪಿದ್ದು, ರಸ್ತೆ ಮೇಲೆ ಚಲ್ಲಾಪಿಲ್ಲಿಯಾಗಿ ಬಿದ್ದಿರುವ ಹೆಣಗಳು ಅಪಘಾತದ ತೀವ್ರತೆಯನ್ನು ಹೇಳುತ್ತಿವೆ. ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವೂ ಸಹ ಎದುರಾಗಿದ್ದು, 20 ಮಂದಿ ಸ್ಥಿತಿ ತೀವ್ರ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
ಅಪಘಾತಕ್ಕೀಡಾದ ಬಸ್’ನಲ್ಲಿ ವಿದ್ಯಾರ್ಥಿಗಳೇ ಹೆಚ್ಚಿನವರಿದ್ದರು ಎಂಬುದು ಆತಂಕಕ್ಕೆ ಕಾರಣವಾಗಿದೆ.
ಇನ್ನು, ಘಟನೆಯನ್ನು ಹಲವಾರು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನೆಲ್ಲಾ ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಂತಾಜನಕ ಸ್ಥಿತಿಯಲ್ಲಿರುವವರನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವೈಜ್ಞಾನಿಕವಾಗಿ ನಿರ್ಮಿಸಿರುವ ರಸ್ತೆ ಉಬ್ಬುತಗ್ಗುಗಳಲ್ಲಿ ಬಸ್ ವೇಗವಾಗಿ ಚಲಿಸಿದ್ದೇ ಅಪಘಾತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.



