ಸೊರಬ:
ಕೆರೆಯಲ್ಲಿ ಎತ್ತುಗಳ ಮೈತೊಳೆಯಲು ಹೋಗಿ ಯುವಕನೊಬ್ಬ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ತವನಂದಿ ಗ್ರಾಮದಲ್ಲಿ ಇಂದು ನಡೆದಿದೆ.
ಕೃಷಿಯಲ್ಲಿ ಪ್ಲಾಸ್ಪೆಟ್, ರಾಸಾಯನಿಕ ಬಳಕೆ ಕುರಿತು ಸರ್ಕಾರದ ಗಮನಸೆಳೆದ ಶಾಸಕ ರುದ್ರೇಗೌಡರು https://tungataranga.com/?p=9529
ತವನಂದಿ ಗ್ರಾಮದ ಪುಟ್ಟಪ್ಪ ಅವರ ಪುತ್ರ ಮಧುಸೂಧನ (23) ಮೃತ ದುರ್ಧೈವಿ.
ಗ್ರಾಮದ ದೊಡ್ಡ ಕೆರೆಯಲ್ಲಿ ಎತ್ತುಗಳ ಮೈ ತೊಳೆಯುತ್ತಿದ್ದ ಸಂದರ್ಭದಲ್ಲಿ ಎತ್ತುಗಳು ನೀರಿಗೆ ಎಳೆದಿವೆ. ಈ ವೇಳೆ ಈಜು ಬಾರದೇ ಮಧುಸೂಧನ್ ನೀರಿನಲ್ಲಿ ಮುಳುಗಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಠಾಣೆ ಸಿಬ್ಬಂದಿ ತೆರಳಿ ಸ್ಥಳೀಯರ ಸಹಕಾರದೊಂದಿಗೆ ಸತತ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಮೃತ ದೇಹವನ್ನು ಪತ್ತೆ ಮಾಡಿದ್ದಾರೆ.
ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.