ಶಿವಮೊಗ್ಗ: ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ಹಾಗೂ ಗ್ರಂಥಾಲಯ ಕಟ್ಟಡದ ಶಂಕುಸ್ಥಾಪನೆ ಸಮಾರಂಭ ಮಾ. 26ರ ಬೆಳಿಗ್ಗೆ 8.30ಕ್ಕೆ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಳಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಆರ್. ಧನಂಜಯ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸಿ. ನಾರಾಯಣಗೌಡ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸುವರು. ಸಚಿವ ಕೆ.ಎಸ್. ಈಶ್ವರಪ್ಪ ಅಧ್ಯಕ್ಷತೆ ವಹಿಸಲಿರುವ ಈ ಕಾರ್ಯಕ್ರಮದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉಪಸ್ಥಿತರಿರುವರು ಎಂದರು.
ಮುಖ್ಯ ಅತಿಥಿಗಳಾಗಿ ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಹೆಚ್. ಹಾಲಪ್ಪ, ಕುಮಾರ್ ಬಂಗಾರಪ್ಪ, ಬಿ.ಕೆ. ಸಂಗಮೇಶ್ವರ, ಕೆ.ಬಿ. ಅಶೋಕ್ ನಾಯ್ಕ್, ಆಯನೂರು ಮಂಜುನಾಥ್, ಸಿ.ಎಂ. ಇಬ್ರಾಹಿಂ, ಎಸ್.ಎಲ್. ಭೋಜೇಗೌಡ, ಎಸ್. ರುದ್ರೇಗೌಡ, ಭಾರತಿಶೆಟ್ಟಿ, ಡಿ.ಎಸ್. ಅರುಣ್, ಸಾವಯವ ಕೃಷಿ ಉನ್ನತ ಮಟ್ಟದ ಅಧಿಕಾರಯುಕ್ತ ಸಮಿತಿ ಅಧ್ಯಕ್ಷ ಡಾ. ಅ.ಶ್ರೀ. ಆನಂದ, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಕಾಡಾ (ಭದ್ರಾ) ಅಧ್ಯಕ್ಷೆ ಪವಿತ್ರ ರಾಮಯ್ಯ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಕೆ.ಪಿ. ಪುರುಷೋತ್ತಮ್, ಕೆ.ಎಸ್.ಎಸ್.ಐ.ಡಿ.ಸಿ. ಉಪಾಧ್ಯಕ್ಷ ಎಸ್. ದತ್ತಾತ್ರಿ, ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ, ಸ್ಬೂಡಾ ಅಧ್ಯಕ್ಷ ಎನ್.ಜಿ. ನಾಗರಾಜ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಪಾಲಿಕೆ ಉಪಮೇಯರ್ ಶಂಕರ್ ಗನ್ನಿ, ಪಾಲಿಕೆ ಸದಸ್ಯೆ ಸುರೇಖಾ ಮುರಳೀಧರ್ ಆಗಮಿಸಲಿದ್ದು, ವಿಶೇಷ ಆಹ್ವಾನಿತರಾಗಿ ವಿಧಾನ ಪರಿಷತ್ ನ ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಉಪಸ್ಥಿತರಿರಲಿದ್ದಾರೆ ಎಂದರು.
ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಸುರೇಶ್ ಮಾತನಾಡಿ, ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಯಾವ ಖಾಸಗಿ ಕಾಲೇಜುಗಳಿಗಿಂತ ಕಡಿಮೆಯಿಲ್ಲ. ಇಲ್ಲಿ ಸುಮಾರು 3 ಸಾವಿರ ವಿದ್ಯಾರ್ಥಿಗಳಿದ್ದಾರೆ. ಅತಿಥಿ ಉಪನ್ಯಾಸಕರು ಸೇರಿದಂತೆ 113 ಉಪನ್ಯಾಸಕರಿದ್ದಾರೆ. 3 ಪಾಳೆಯದಲ್ಲಿ ತರಗತಿಗಳು ನಡೆಯುತ್ತವೆ. ಎಲ್ಲ ಸರ್ಕಾರಗಳು ಈ ಕಾಲೇಜಿನ ಅಭಿವೃದ್ಧಿಗೆ ಶ್ರಮಿಸಿವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಉಪನ್ಯಾಸಕರಾದ ಡಾ. ಚನ್ನೇಶ್, ಡಾ. ಪ್ರಸನ್ನ, ಪ್ರೊ. ರವಿ, ಶಿವಲಿಂಗಪ್ಪ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯೆ ಸುರೇಖಾ ಮುರಳೀಧರ್ ಮುಂತಾದವರಿದ್ದರು.