ಬೆಂಗಳೂರು,ಏ.05:
ಕರ್ನಾಟಕ ಸರ್ಕಾರಿ ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳದ ಮೂಲಕ ಸಿಹಿ ಸುದ್ದಿ ನೀಡಿದೆ.
ಸರ್ಕಾರ ತುಟ್ಟಿ ಭತ್ಯೆ ಹೆಚ್ಚಳ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಿದೆ.
ಈ ಬಗ್ಗೆ ಬೊಮ್ಮಾಯಿ ಮೌಖಿಕವಾಗಿ ಘೋಷಣೆ ಮಾಡಿದ್ದು, ಸರ್ಕಾರದಿಂದ ಅಧಿಕೃತ ಆದೇಶ ಬಾಕಿ ಇದೆ.
ಅವರು ಈ ಬಗ್ಗೆ ಟ್ವೀಟ್ ಮಾಡಿರುದ ಸಿಎಂ ಬೊಮ್ಮಾಯಿ, ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ತುಟ್ಟಿಭತ್ಯೆ ಹೆಚ್ಚಳ ಮಾಡಿರುವುದನ್ನು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅಭಿನಂಧಿಸಿದ್ದಾರೆ.