ಗೃಹಸಚಿವ ಅರಗ ಜ್ಞಾನೆಂದ್ರ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಜಯನಗರ ಠಾಣೆಯಲ್ಲಿ ದೂರು ದಾಖಲು
Tungataranga April 08_2022 | shimoga news
ಕರ್ನಾಟಕ ರಾಜ್ಯದ ‘ಗೃಹ ಮಂತ್ರಿ ಆರಗ ಜ್ಞಾನೇಂದ್ರರವರು ಜಾತಿ-ಧರ್ಮಗಳ ನಡುವೆ ಕೋಮು ಗಲಭೆ ಸೃಷ್ಟಿಸುವ ನಿಟ್ಟಿನಲ್ಲಿ ಪ್ರಚೋದನಾಕಾರಿ ಹೇಳಿಕೆಯನ್ನು ನೀಡಿ ತದನಂತರ ನನ್ನ ಹೇಳಿಕೆ ತಪ್ಪಾಗಿದೆ ನಾನು ತಪ್ಪು ಅರ್ಥೈಸಿಕೊಂಡಿದ್ದೇನೆ ಎಂದು ಸಬೂಬು ಹೇಳುತ್ತಿದ್ದಾರೆ.
ಉನ್ನತ ಸ್ಥಾನದಲ್ಲಿರುವ ಸಚಿವ ಅರಗ ಜ್ಞಾನೇಂದ್ರ ಅವರು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಬಿಟ್ಟು ಬಿಜೆಪಿಯ ಹೈಕಮಾಂಡ್ ಅನ್ನು ಮೆಚ್ಚಿಸಲು ಈ ರೀತಿಯ ಇಲ್ಲಸಲ್ಲದ ಪೂರಕವಲ್ಲದ ಹೇಳಿಕೆಗಳನ್ನು ನೀಡಿ ತದನಂತರ ತಪ್ಪಾಗಿದೆ ಎಂದು ಹೇಳುತ್ತಿರುವುದು ತೀವ್ರವಾಗಿ ಖಂಡಿಸಿ ಇಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದ ಜಯನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಸ್ಪೆಕ್ಟರ್ ಮಾದಪ್ಪ ಅವರ ಮೂಲಕ ಜಯನಗರ ಪೊಲೀಸ್ ಠಾಣೆಗೆ ದೂರು ನೀಡಲಾಯಿತು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ. ಗಿರೀಶ್ , ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್ , ದಕ್ಷಿಣ ಬ್ಲಾಕ್ ಎಸ್ ಕುಮರೇಶ್ , ಗ್ರಾಮಾಂತರ ಅಧ್ಯಕ್ಷ ಇ. ಟಿ ನಿತಿನ್, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ರಾಕೇಶ್ , ಪದಾಧಿಕಾರಿಗಳಾದ ಪವನ್, ದರ್ಶನ್ , ಶ್ರೀನಿವಾಸ್, ಗಜ, ವೆಂಕಟೇಶ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು