ಶಿವಮೊಗ್ಗ : ಶಿಕ್ಷಣ ಕೇವಲ ಅಂಕಕ್ಕೆ ಸೀಮಿತವಾಗ ಬಾರದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.
ಅವರು ಇಂದು ಕರ್ನಾಟಕ ಸಂಘದಲ್ಲಿ ಆಯೋಜಿಸಿದ್ದ ಚಿತ್ರಕಲಾ ಶಿಕ್ಷಕ ದೀಪುರವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.

ಇಂದಿನ ಶಿಕ್ಷಣ ಕೇವಲ ಅಂಕಕ್ಕೆ ಸೀಮಿತವಾಗಿದೆ. ಪಠ್ಯೇತರ ಚಟುವಟಿಕೆಗಳು ಕಡಿಮೆಯಾಗುತ್ತಿವೆ. ಎಲ್ಲಾ ಶಿಕ್ಷಣ ಸಂಸ್ಥೆಗ ಳಲ್ಲೂ ಕ್ರೀಡೆ, ಸಾಹಿತ್ಯ, ಸಂಗೀತ ಕರಕುಶಲ ಮತ್ತು ಚಿತ್ರಕಲೆಗೆ ಆದ್ಯತೆ ನೀಡಬೇಕು. ವಿದ್ಯಾರ್ಥಿಯ ಸರ್ವಾಂಗೀಣ ಅಭಿವೃದ್ಧಿಗೆ ಇದು ಪೂರಕವಾಗಲಿದೆ ಎಂದರು.
ಚಿತ್ರಕಲೆ ಎಂಬುದು ಬಹು ಪುರಾತನ ವಾದುದು. ಈ ಕಲೆ ಉಳಿಯಬೇಕು ಮತ್ತು ಬೆಳೆಯಬೇಕು. ಇದರಿಂದ ಸ್ಮರಣಶಕ್ತಿ ಕಲ್ಪನಾ ಲೋಕ, ಒಳ್ಳೆಯ ಮನಸು ಹೆಚ್ಚುತ್ತದೆ ಎಂದರು.
ಮಾನವೀಯ ಮೌಲ್ಯಗಳು ಕುಸಿಯುತ್ತಿ ರುವುದು ಮತ್ತೊಂದು ಆತಂಕದ ವಿಷಯ ವಾಗಿದೆ. ವೃದ್ಧಾಶ್ರಮಗಳು ಹೆಚ್ಚುತ್ತಿವೆ. ಕೌಟುಂ ಬಿಕ ಪ್ರೇಮ ಮರೆಯಾಗುತ್ತಿವೆ. ಇಂತಹ ಸಂದರ್ಭದಲ್ಲಿ ಮಕ್ಕಳಲ್ಲಿ ಸೃಜನಾತ್ಮಕ ಕಲೆ ಹೆಚ್ಚಿಸುವುದರ ಜೊತೆಗೆ ಮೌಲ್ಯಯುತ ಶಿಕ್ಷಣದ ಅಗತ್ಯತೆಯೂ ಇದೆ ಎಂದರು.
ಮೇಯರ್ ಸುನಿತಾ ಅಣ್ಣಪ್ಪ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ, ಕರ್ನಾಟಕ ಸಂಘದ ಗೌರವ ಕಾರ್ಯದರ್ಶಿ ಪ್ರೊ. ಆಶಾಲತಾ, ರಾಜ್ಯ ಚಿತ್ರಕಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಡಾ. ಬಿ.ಜಿ. ಅವಟಿ ಮೊದಲಾದವರಿದ್ದರು.